Free sewing machine scheme: ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ.!
ಕರ್ನಾಟಕ ರಾಜ್ಯ ಸರ್ಕಾರದಿಂದ 2014-25 ನೇ ಸಾಲಿನ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯ ಅಡಿಯಲ್ಲಿ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ (Free sewing machine) ಹಾಗೂ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಸಲಕರಣೆ ಯೋಜನೆ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಪ್ರತಿ ವರ್ಷವೂ ಕೂಡ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿಗಳನ್ನು ಆಹ್ವಾನಿಸಿ ಅರ್ಹ ಮಹಿಳೆಯರಿಗೆ ಉಚಿತವಾಗಿ ಹೋಲಿಕೆ ಯಂತ್ರವನ್ನು ನೀಡಲಾಗುತ್ತದೆ ಹಾಗೂ ಕೆಲವು ವೃತ್ತಿಪರ ಕುಶಲಕರ್ಮಿಗಳಿಗೆ ಅವರ ವೃತ್ತಿಗೆ ಸಂಬಂಧಿಸಿದ ಸಲಕರಣೆಗಳನ್ನು ಉಚಿತವಾಗಿ ನೀಡಲಾಗುತ್ತದೆ ಸದ್ಯ ಇದೀಗ ರಾಜ್ಯ ಸರ್ಕಾರದಿಂದ 2024 25 ನೇ ಸಾಲಿನ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಹ ಮಹಿಳೆಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಆನ್ಲೈನ್ ನಲ್ಲಿ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ ನೀವು ಕೂಡ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಬೇಕು ಎಂದುಕೊಂಡಿದ್ದರೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು ಏನೆಲ್ಲಾ ದಾಖಲೆಗಳನ್ನು ಕೇಳಲಾಗುತ್ತದೆ ಮತ್ತು ಅರ್ಜಿಯನ್ನು ಸಲ್ಲಿಸುವುದು ಹೇಗೆ ಅದರ ಕೊನೆಯ ದಿನಾಂಕ ಹೇಗೆ ಎಲ್ಲಾ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ.
![]() |
Free sewing machine scheme: ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ.! |
ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ.!
ಈ ಮೇಲೆ ತಿಳಿಸಿದ ಹಾಗೆ ಸರ್ಕಾರದ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ವಿತರಣೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗುತ್ತಿದ್ದು ಈ ಯೋಜನೆಗೆ ಗ್ರಾಮೀಣ ಪ್ರದೇಶದ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ, ಇನ್ನು ಪ್ರತಿ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ಹೊಲಿಗೆ ಯಂತ್ರಗಳು ಹಾಗೂ ವೃತ್ತಿ ನಿರತ ಕುಶಲಕರ್ಮಿಗಳಿಗೆ ವಿವಿಧ ಉಪಕರಣಗಳನ್ನು ಉಚಿತವಾಗಿ ವಿತರಿಸಲಾಗುತ್ತಿದ್ದು ಈ ಯೋಜನೆಗಳ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ವೃತ್ತಿ ಆಧಾರಿತ ಯಂತ್ರೋಪಕರಣಗಳನ್ನು ಪಡೆಯಬಹುದಾಗಿದೆ.
ಉಚಿತ ಹೊಲಿಗೆ ಯಂತ್ರಕ್ಕೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು.?
ಸರ್ಕಾರದ ಉಚಿತ ಹೊಲಿಗೆ ಯಂತ್ರ ವಿತರಣೆಯ ಯೋಜನೆಗೆ ಗ್ರಾಮೀಣ ಪ್ರದೇಶದ ಮಹಿಳೆಯರು ಅರ್ಜಿಯನ್ನು ಸಲ್ಲಿಸಬಹುದು
ಗ್ರಾಮೀಣ ಪ್ರದೇಶದ ಮಹಿಳೆಯರಲ್ಲಿ ಪ್ರತಿನಿರತ ಕಸುಬುಗಳಾದ ಮರ ಕೆಲಸ ಮಾಡುವವರು, ಬಟ್ಟೆ ತೊಳೆಯುವ ಕಸುಬು ಮಾಡುವವರು, ಮಡಿವಾಳರು, ಗಾರೆ ಕೆಲಸ ಮಾಡುವವರು, ಕ್ಷೌರಿಕ ವೃತ್ತಿ ಮಾಡುವವರು, ದರ್ಜಿಗಳು ಅಥವಾ ವೃತ್ತಿಪರ ಹೋಲಿಗೆ ಕೆಲಸ ಮಾಡುವ ಯಾವುದೇ ಮಹಿಳೆಯರು ಈ ಯೋಜನೆ ಅಡಿಯಲ್ಲಿ ಇರುವ ಉಪಕರಣಗಳಿಗೆ ಅರ್ಜಿ ಸಲ್ಲಿಸಿ ಯಂತ್ರೋಪಕರಣಗಳನ್ನು ಪಡೆಯಬಹುದು
![]() |
Free sewing machine scheme: ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ.! |
ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಕೆ ಷರತ್ತುಗಳೇನು.
ಮೊದಲನೆಯದಾಗಿ ಈಗಾಗಲೇ ತಿಳಿಸಿದ ಹಾಗೆ ಗ್ರಾಮೀಣ ಪ್ರದೇಶದ ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ ಅನ್ವಯವಾಗುತ್ತದೆ.
ಹೊಲಿಗೆ ಯಂತ್ರಗಳನ್ನು ಪಡೆಯುವ ಸಾಮಾನ್ಯ ಮತ್ತು ಇತರ ಅಭ್ಯರ್ಥಿಯು ಕನಿಷ್ಠ 18 ವರ್ಷದಿಂದ ಗರಿಷ್ಠ 38 ವರ್ಷದ ವರೆಗೆ ವಯೋಮಿತಿ ಹೊಂದಿರಬೇಕು
ಇನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಾಗಿದ್ದರೆ ಕನಿಷ್ಠ 18 ರಿಂದ 40 ವರ್ಷ ಮೀರಿರಬಾರದು
ಇನ್ನು ಈ ಯೋಜನೆ ಅಡಿ ಹೊಲಿಗೆ ಯಂತ್ರ ಅಥವಾ ಬೇರೆ ಸಲಕರಣೆಯನ್ನು ಈಗಾಗಲೇ ಪಡೆದಿದ್ದರೆ ಅಂತಹ ಮಹಿಳೆಯು ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಬೇಕು ಹಾಗೂ ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ
ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು ಮತ್ತು ಕೊನೆಯ ದಿನಾಂಕ.?
ಉಚಿತ ಹೊಲಿಗೆ ಯಂತ್ರಕ್ಕೆ ಮಹಿಳೆಯರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿತ್ತು ಈ ಮೇಲೆ ತಿಳಿಸಲಾದ ಕೆಲವು ನಿಯಮಗಳನ್ನು ಪಾಲಿಸಬೇಕಾಗುತ್ತದೆ ಅರ್ಹ ಮಹಿಳೆಯರು ಅರ್ಜಿ ಸಲ್ಲಿಸಲು..
- ಅರ್ಜಿದಾರರ ಆಧಾರ್ ಕಾರ್ಡ್
- ಪಡಿತರ ಚೀಟಿ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಗ್ರಾಮ ಪಂಚಾಯಿತಿ ಪಿಡಿಓ ಅವರಿಂದ ವೃತ್ತಿಪರ ಅಂದರೆ ವೃತ್ತಿ ಮಾಡುತ್ತಿರುವ ಬಗ್ಗೆ ದೃಢೀಕರಣ ಪತ್ರ
- ಅರ್ಜಿದಾರರ ಪಾಸ್ಪೋರ್ಟ್ ಗಾತ್ರದ ಭಾವಚಿತ್ರ
- ಅಭ್ಯರ್ಥಿ ವಿಕಲಚೇತನ ಹಾಗಿದ್ದರೆ udid card
ಈ ಎಲ್ಲಾ ದಾಖಲೆಗಳನ್ನು ಅರ್ಜಿ ಸಲ್ಲಿಸಲು ಕೇಳಲಾಗುತ್ತದೆ ಇನ್ನು ಅರ್ಜಿ ಸಲ್ಲಿಸಲು 2024 25 ನೇ ಸಾಲಿನ ಜಿಲ್ಲಾ ಉದ್ಯಮ ಕೇಂದ್ರ ಯೋಜನೆ ಅಡಿಯಲ್ಲಿ ಕೆಲವು ಜಿಲ್ಲೆಗಳಿಗೆ ಒಂದೊಂದು ಕೊನೆಯ ದಿನಾಂಕವನ್ನು ನಿಗದಿ ಪಡಿಸಲಾಗಿದೆ ಆದರೆ ಎಲ್ಲಾ ಜಿಲ್ಲೆಯಲ್ಲಿಯೂ ಅರ್ಜಿ ಸಲ್ಲಿಸಲು ಆಗಸ್ ಹತ್ತನೇ ದಿನಾಂಕದವರೆಗೂ ಅವಕಾಶ ಇರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ.?
ಮಹಿಳಾ ಉಚಿತ ಹೊಲಿಗೆ ಯಂತ್ರಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿತ್ತು ಅರ್ಜಿ ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್ಸೈಟ್ ಆದ ಸೇವಾ ಸಿಂಧು ಫೋಟೋನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಥವಾ ಹತ್ತಿರದ ಸೈಬರ್ ಸೆಂಟರ್ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಧನ್ಯವಾದಗಳು..